ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಕೇಂದ್ರಕ್ಕೆ ಫಾರುಖ್ ಅಬ್ದುಲ್ಲಾ ಆಗ್ರಹ

ಶ್ರೀನಗರ, ಮಾ.11- ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನ ನೀಡುವಂತೆ ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರುಖ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ಮು ಒತ್ತಾಯಿಸಿದ್ದಾರೆ.

ರಾಜ್ಯ ಸ್ಥಾನ ಮಾನ ನೀಡುವ ಜೊತೆಗೆ ಮರಳಿ ಚುನಾವಣೆಗಳು ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಷ್ಟ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಹೆಮ್ಮೆಯ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಸ್ಥಾನ ಮಾನ ನೀಡಲಾಗಿರುವುದು ದುರಂತದ ಸಂಗತಿ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ನಾವು ಈ ರಾಷ್ಟ್ರಕ್ಕೆ ಸೇರಿದವರು, ಅವರು ನಮಗೆ ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ‌.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ , 2019ರ ಆಗಸ್ಟ್ ತಿಂಗಳಲ್ಲಿ ರಾಜ್ಯಸ್ಥಾನ ವಾಪಸ್ ಪಡೆದು ಕೇಂದ್ರಾಡಳಿತ ಪ್ರದೇಶ ಮಾಡಲಾಗಿದೆ.

ಜಮ್ಮು ಕಾಶ್ಮೀರಕ್ಕೆ ವಿಧಾನಸಭೆಗೆ ಚುನಾವಣೆ ನಡೆಸುವ ಉದ್ದೇಶದಿಂದ ಕ್ಷೇತ್ರ ಪುನರ್ ವಿಂಗಡೆ ಕಾರ್ಯ ನಡೆಯುತ್ತಿದೆ.ಒಮ್ಮೇ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ‌ಮುಗಿದ ನಂತರ ರಾಜ್ಯಸ್ಥಾನ ಮಾನ ನೀಡಲು ಉದ್ದೇಶಿಸಿದೆ.