ಜಯಂತಿ ಅಂಗವಾಗಿ ಅನ್ನಸಂತರ್ಪಣೆ


ಬಾದಾಮಿ,ಎ.18: ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯ ಅಂಗವಾಗಿ ಶುಕ್ರವಾರ ಅಂಬೇಡ್ಕರ್ ವೃತ್ತದ ಹತ್ತಿರ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ತಾಲೂಕಾ ಘಟಕದ ವತಿಯಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಈ ಬಾರಿ ವಿಶೇಷವಾಗಿ ಅನ್ನ ಸಂತರ್ಪಣೆ ಏರ್ಪಡಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ವೃತ್ತದ ಸುತ್ತ ಮುತ್ತಲಿನ ಬಡಾವಣೆಯ ಜನರೊಂದಿಗೆ ಬನಶಂಕರಿ ದೇವಿ ದರ್ಶನಕ್ಕೆ ಹೋಗುವ ಜನತೆಯೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಭೀಮ್ ಆರ್ಮಿ ತಾಲೂಕಾ ಅಧ್ಯಕ್ಷ ವೀರೇಶ ಶಂ. ಕಾಟಾಪೂರ, ಉಪಾಧ್ಯಕ್ಷ ಫಕ್ರುದ್ದೀನ್ ಹುಡೇದಮನಿ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳು ಮತ್ತು ನಗರ ಘಟಕದ ಪದಾಧಿಕಾರಿಗಳು ಹಾಗೂ ಭೀಮ್ ಆರ್ಮಿ ಗ್ರಾಮದ ಶಾಖಾ ಪದಾಧಿಕಾರಿಗಳು ಹಾಜರಿದ್ದರು.