ಜಯದೇವಿ ಗಾಯಕವಾಡಗೆ ಲಿಗಾಡೆ ರಾಷ್ಟ್ರೀಯ ಪುರಸ್ಕಾರ

ಭಾಲ್ಕಿ: ಜೂ.24:ಬಸವಕಲ್ಯಾಣದ ವಿಶ್ವ ಬಸವಧರ್ಮ ಟ್ರಸ್ಟ್ ವತಿಯಿಂದ ಕೊಡ ಮಾಡುವ ಡಾ. ಜಯದೇವಿ ತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರಕ್ಕೆ ಲೇಖಕಿ ಜಯದೇವಿ ಗಾಯಕವಾಡ ಹುಮನಾಬಾದ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 11 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.

ಬಸವಕಲ್ಯಾಣದ ಅನುಭವಮಂಟಪಲ್ಲಿ ನಡೆಯುವ ಡಾ. ಜಯದೇವಿ ತಾಯಿ ಲಿಗಾಡೆ ಅವರ ಜಯಂತಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಜಯದೇವಿ ಗಾಯಕವಾಡ ಅವರು ಕಲ್ಯಾಣ ಕರ್ನಾಟಕ ಭಾಗದ ಹೆಸರಾಂತ ಸಾಹಿತಿಗಳಾಗಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಇವರು ಸಾಹಿತ್ಯ ರಚನೆ ಮಾಡಿದ್ದಾರೆ. ಕಾದಂಬರಿ,ಕವನ, ಗಝಲ್, ಜೀವನ ಚರಿತ್ರೆ, ವೈಚಾರಿಕ ಸಾಹಿತ್ಯ, ವಿಮರ್ಶೆ ಮತ್ತು ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಸಲ್ಲಿಸಿದ್ದಾರೆ.

ಬಸವಾದಿ ಶರಣರ ಹಾಗೂ ಇನ್ನಿತರ ಮಹಾಪುರುಷರ ವೈಚಾರಿಕ ಸಾಹಿತ್ಯವನ್ನು ಬರೆದಿರುವುದು ವಿಶೇಷ ಸಂಗತಿಯಾಗಿದೆ. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ನಾಡಿನ ಸಂಘ ಸಂಸ್ಥೆಗಳು ಅನೇಕ ಪ್ರಶಸ್ತಿ ನೀಡಿ ಗೌರವಿಸಿವೆ.