ಜಲ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿರಲಿ

ಸಂಜೆವಾಣಿ ವಾರ್ತೆ

ಹಿರಿಯೂರು : ಅ. 14-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ನಗರಸಭೆಯ ಸಹಯೋಗದಲ್ಲಿ 459ನೇ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಯೋಜನೆ ಯ ಚಿತ್ರದುರ್ಗ ಜಿಲ್ಲಾ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಬಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು ಹಾಗೂ ನೀರಿನ ಉಳಿವಿಗಾಗಿ ನೀರನ್ನು ಮಿತವಾಗಿ ಬಳಸುವಂತೆ ತಿಳಿಸಿದರು. ಹಿರಿಯೂರು ನಗರ ಸಭೆಯ ಪೌರಾಯುಕ್ತರಾದ ಹೆಚ್  ಮಹಾಂತೇಶ್ ರವರು ಮಾತನಾಡಿ ಎಲ್ಲರೂ ಶುದ್ಧ ಕುಡಿಯುವ ನೀರನ್ನು ಕುಡಿಯುವ ಮೂಲಕ ಆರೋಗ್ಯ ಸಂರಕ್ಷಿಸಿಕೊಳ್ಳಿ ಎಂದು ಹೇಳಿದರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ನಗರ ಸಭೆಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಗೀತಾ   ಗಂಗಾಧರ್ ತಾಲೂಕಿನ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ, ಉಪತಹಶೀಲ್ದಾರ್  ತಿಪ್ಪೇಸ್ವಾಮಿ  ಯೋಜನಾಧಿಕಾರಿ ಹರಿಪ್ರಸಾದ್ ರೈ,ಶುದ್ಧಗಂಗಾ ಮೇಲ್ವಿಚಾರಕರಾದ ರಾಘವೇಂದ್ರ ವಲಯ ಮೇಲ್ವಿಚಾರಕರಾದ ಶಿವಕುಮಾರ್  ವಲಯದ ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.