ಜವಳಿ ಪಾರ್ಕ್:ಸಚಿವ ಶ್ರೀಮಂತ ಪಾಟೀಲರೊಂದಿಗೆ ಶಾಸಕ ಪ್ರಿಯಾಂಕ್ ಖರ್ಗೆ ಚರ್ಚೆ

ಕಲಬುರಗಿ,ಏ.2-ಜಿಲ್ಲೆಗೆ ಮಂಜೂರಾಗಿದ್ದ ಜವಳಿ ಪಾರ್ಕ್ ನ್ನು ಕೇಂದ್ರ ಸರ್ಕಾರ ಕೈಬಿಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀಮಂತ ಪಾಟೀಲ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಶ್ರೀ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿದ್ದಾರೆ.
ಜವಳಿ ಪಾರ್ಕ್ ಸ್ಥಾಪನೆ ಕುರಿತಂತೆ ನಮ್ಮ ಪ್ರಯತ್ನವನ್ನು ಪರಿಗಣಿಸಿ ಯೋಜನೆಯನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಬಂಡವಾಳ ಹೂಡಿಕೆ ಕುರಿತು ಬದ್ಧತೆ ತೋರಿಸದ ಹೊರತು ಯೋಜನೆ ಅಸಾಧ್ಯ ಎಂದು ಕಂಡುಬರುತ್ತಿದೆ ಎಂದು ಹೇಳಿದ್ದಾರೆ.