ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸ್ವೀಪ್ ಸಮಿತಿ ಸದಸ್ಯರಿಗೆ ಸಿಇಓ ಸೂಚನೆ

ವಿಜಯಪುರ:ನ.24: ಜಿಲ್ಲೆಯ ಎಲ್ಲ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡು ಮತದಾನದಿಂದ ವಂಚಿತವಾಗದಂತೆ ನೋಡಿಕೊಳ್ಳಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ಇ.ಎಲ್.ಸಿ., ಎನ್.ವ್ಹಿ.ಡಿ. ಎಸ್.ಎಸ್.ಆರ್-2023ರ ಕಾರ್ಯಕ್ರಮಗಳ ಕಾರ್ಯಚಟುವಟಿಕೆಗಳ ಕುರಿತು ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹ ಅಧಿಕಾರಿ ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರರವರೊಂದಿಗೆ ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ 2023ರ ವಿಧಾಸಾಭಾ ಚುನಾವಣೆಯ ಪೂರ್ವಭಾವಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಮತದಾರ ಜನಸಂಖ್ಯಾ ಅನುಪಾತ (ಇP ಖಚಿಣio) ಲಿಂಗಾನುಪಾತ, (ಉeಟಿಜeಡಿ ಖಚಿಣio), ಮತದಾನ ಅನುಪಾತ (ಗಿoಣeಡಿ ಖಿuಡಿಟಿouಣ ಖಚಿಣio) ಗಳ ಕುರಿತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಅರ್ಹ ವಿಕಲಚೇತನ ಮಾತದಾರರನ್ನು ಗುರುತಿಸಿ, ಅರ್ಹ ಮತದಾರರ ಹೆಸರನ್ನು ಮತಪಟ್ಟಿಯಲ್ಲಿ ನೊಂದಾಯಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತವಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ. ನಿಂಗಪ್ಪ ಕೆ. ಗೋಠೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿರಹಟ್ಟಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಗಲಿ, ಪ್ರಥಮ ದರ್ಜೇ ಪದವಿ ಕಾಲೇಜಿನ ಇಎಲ್‍ಸಿ ಸಂಚಾಲಕರಾದ ಡಾ|| ಬಿ. ಎಮ್. ಕೋರಬು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಗಿ, ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹ ಅಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲ ತಹಶೀಲ್ದಾರರು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.