ಜವಾಹರ್‌ಲಾಲ್ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆ


ದಾವಣಗೆರೆ.ನ.೧೩: ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ಅವರ ಜನ್ಮದಿನಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ನವೆಂಬರ್ ೧೪ರಂದು ಆಚರಿಸಲಾಗುವುದು. ನಾಳೆ ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯ ಎಸ್.ಎಸ್.ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಕಿಸಾನ್, ಸಾಮಾಜಿಕ ಜಾಲತಾಣ ವಿಭಾಗ, ಅಲ್ಪಸಂಖ್ಯಾತರ ವಿಭಾಗ, ಪದವೀಧರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಭಾಗವಹಿಸಬೇಕೆಂದು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.