ಜಾಗೃತಿ ಜಾಥಾಕ್ಕೆ ಚಾಲನೆ

ಗದಗ ಜೂ. 3: ಗದಗ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜಿಲ್ಲಾಡಳಿತ ಆವರಣದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಜಾಗೃತಿ ಜಾಥಾಕ್ಕೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|| ವಾಯ್. ಕೆ ಭಜಂತ್ರಿ ಚಾಲನೆ ನೀಡಿದರು.
ಗ್ರಾಮಗಳ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಗಂಟಲು ದ್ರವ ತಪಾಸಣೆ ನಡೆಸುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸ ಮಾಡಬೇಕು ಹಾಗೂ ಈಗಾಗಲೇ ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ವೈದ್ಯರ ತಂಡವು ಪರೀಕ್ಷೆ ಮಾಡುವಾಗ ಯಾರಿಗಾದರೂ ಕೊರೊನಾ ಸೋಂಕು ದೃಡಪಟ್ಟಿದ್ದರೆ ಅವರನ್ನು ಕೊರೊನಾ ಕೇಂದ್ರಕ್ಕೆ ಸೇರಿಸುವ ಕೆಲಸ ಮಾಡಬೇಕು, ಸ್ಥಳದಲ್ಲಿ ಮಾತ್ರೆಗಳನ್ನು ಕೊಡಲು ತಂಡ ಕೆಲಸ ಮಾಡಬೇಕೆಂದು ಹೇಳಿದರು. ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಐ.ಇ.ಸಿ. ವಾಹನ ಮುಖಾಂತರ ಎಲ್ಲ ಗ್ರಾಮಗಳಲ್ಲಿ ಸಂಚರಿಸಿ ಮೈಕಿಂಗ್ ಮೂಲಕ ಸಾರ್ವಜನಿಕರಿಗೆ ಕೋರೋನ ಸೋಂಕು ತಡೆಗಟಟುವಂತೆ ಮುಂಜಾಗ್ರತಾ ಕ್ರಮದ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪಿ. ಎಸ್. ರೋಡಗಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.