ಜಾಗೃತಿ ಮೂಡಿಸಿದ ಸಂವಿಧಾನ ರಥ

ಧಾರವಾಡ, ಫೆ.3: ಸಂವಿಧಾನ ದಿನಾಚರಣೆಯ ಪ್ರಯುಕ್ತ”ಸಂವಿಧಾನ ಜಾಗೃತಿ ಜಾಥಾವನ್ನು”ಧಾರವಾಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯೋಗದೊಂದಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿ ಚಾಲನೆ ನೀಡಿದರು. ಸದರಿ ಸಂವಿಧಾನ ಜಾಥಾವನ್ನು ಹಳ್ಳಿಗೇರಿ, ನಿಗದಿ, ಮನಗುಂಡಿ, ಮನಸೂರ ಹಾಗೂ ಯರಿಕೊಪ್ಪ ಗ್ರಾಮ ಪಂಚಾಯತ್‍ಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಶ್ರೀಮತಿ ಎಂ.ಬಿ.ಸಣ್ಣೇರ ಇವರ ಉಪಸ್ಥಿತಿಯಲ್ಲಿ ಹಲವಾರು ಕಲಾ ತಂಡಗಳು, ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು, ಕಾರ್ಯಕ್ರಮದಲ್ಲಿ ಪಾಲ್ಗೋಂಡು ಪ್ರಭಾತಪೇರಿಯ ಮೂಲಕ ಮೆರವಣಿಗೆ ಗ್ರಾಮದ ಎಲ್ಲಾ ಬೀದಿ ಬೀದಿಗಳಲ್ಲಿ ಸಂಚರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸುವಿಕೆ, ಸಂವಿಧಾನದ ಮಹತ್ವದ ಕುರಿತು ಉಪನ್ಯಾಸಕರಿಂದ ಉಪನ್ಯಾಸ, ಬೀದಿ ನಾಟಕಗಳ ಮೂಲಕ ಸಾಮಾಜಿಕ ಅರಿವು ಮೂಡಿಸುವ ಹಾಗೂ ಶಾಲಾ ವಿದ್ಯಾರ್ಥಿಗಳ ಹಲವಾರು ಸಂವಿಧಾನದ ಬಗ್ಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ದ್ವಿಚಕ್ರ ವಾಹನ ರ್ಯಾಲಿ ಏರ್ಪಡಿಸಲಾಗಿತ್ತು.

ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮಾಡಿಸಲಾಯಿತು. ತ್ರಿವರ್ಣಧ್ವಜದ ಬಣ್ಣಗಳ ಬಲೂನಗಳನ್ನು ಹಾರಿಸುವುದರೊಂದಿಗೆ ನಿಗದಿ ಗ್ರಾಮದಿಂದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಮುಂದಿನ ಗ್ರಾಮಕ್ಕೆ ಬೀಳ್ಕೊಡಲಾಯಿತು.

ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಾ, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿರುತ್ತಾರೆ.
(ಫೋಟೋ ಇವೆ)