ಜಾಗೃತಿ ವಹಿಸಲು ಎಂ.ವೈ ಪಾಟೀಲ ಸಲಹೆ

ಅಫಜಲಪುರ:ಎ.19: ಕೋವಿಡ್ 19 ರೋಗವು ದಿನದಿಂದ ದಿನಕ್ಕೆ ಮತ್ತೆ ಹೆಚ್ಚಾಗುತ್ತಿದ್ದು, ಹೀಗಾಗಿ ತಾಲೂಕಿನ ಜನರು ಬಹಳಷ್ಟು ಜಾಗೃತಿ ವಹಿಸಬೇಕು. ಹಾಗೂ ತಮ್ಮ ಏನಾದರೂ ಸಮಸ್ಯೆಗಳಿದ್ದರೆ ಮುಖಾಮುಖಿಯಾಗಿ ಭೇಟಿಯಾಗದೆ ದೂರವಾಣಿ ಕರೆಯ ಮೂಲಕ ತಮ್ಮ ಕುಂದುಕೊರತೆಗಳನ್ನು ಹಾಗೂ ತಮ್ಮ ಗ್ರಾಮದ ಸಮಸ್ಯೆಗಳನ್ನು ತಿಳಿಸಬೇಕು. ತಕ್ಷಣ ತಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕ ಎಂ.ವೈ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ತಾಲೂಕಿನ ಬಂದರವಾಡ ಗ್ರಾಮದಲ್ಲಿ ಈಗಾಗಲೇ 108 ಜನರಿಗೆ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 08 ವಿದ್ಯಾರ್ಥಿಗಳು ಸೇರಿದ್ದು, ಆತಂಕ ಹೆಚ್ಚಿಸಿದೆ. ಹೀಗಾಗಿ ತಾಲೂಕಾ ಆರೋಗ್ಯ ಇಲಾಖೆ, ಜಿಲ್ಲಾಡಳಿತ, ತಾಲೂಕಾ ಆಡಳಿತದವರು ಬಂದರವಾಡ ಗ್ರಾಮದ ಮೇಲೆ ವಿಶೇಷ ನಿಗಾ ವಹಿಸಲು ಸೂಚನೆ ನೀಡಿದ್ದೇವೆ. ಹಾಗೂ ತಾಲೂಕಿನ ಬಹುತೇಕ ಕಡೆಗಳಲ್ಲಿ ಇಂತಹ ಪ್ರಕರಣಗಳು ಕಂಡುಬರುತ್ತಿದ್ದು, ಹೀಗಾಗಿ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಅನಾವಶ್ಯಕವಾಗಿ ಗುಂಪು ಸೇರುವುದು. ಮನೆಯಿಂದ ಹೊರಬರುವುದನ್ನು ಬಿಡಬೇಕು. ಯಾರಿಗಾದರೂ ಆರೋಗ್ಯ ಸಮಸ್ಯೆ ಕಂಡುಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ತಾಲೂಕಿನ ಸಾರ್ವಜನಿಕರು ಏನಾದರೂ ಸಮಸ್ಯೆಗಳಿದ್ದರೆ, ಅವರ ಪುತ್ರ ಜಿಪಂ ಸದಸ್ಯ ಅರುಣಕುಮಾರ ಪಾಟೀಲ 9449080891 ಹಾಗೂ ಆಪ್ತ ಸಹಾಯಕ ರಾಹುಲ ಮಳ್ಳಿ 9986315123, ರವಿ 8880888266, ಕುಮಾರ 8861268588 ಈ ಫೋನ್ ನಂಬರ್‍ಗಳಿಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.