ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಮಾ.30:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ, ಕರ್ನಾಟಕ ಪ್ರದೇಶ ಕುರುಬರ ಸಂಘ, ಜಿಲ್ಲಾ ಕುಂಬಾರರ ಸಂಘ, ಜಿಲ್ಲಾ ಸವಿತ ಸಮಾಜ, ಜಿಲ್ಲಾ ಮಡಿವಾಳ ಸಂಘ, ಕರ್ನಾಟಕ ದಲಿತ ವೇದಿಕೆ,ಜಿಲ್ಲಾ ಭಗೀರಥ ಉಪ್ಪಾರರ ಸಂಘ, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ, ಜಿಲ್ಲಾ ಆರ್ಯ ಈಡಿಗರ ಸಂಘ, ಜಿಲ್ಲಾ ಗಾಣಿಗರ ಸಮಾಜ, ದಲಿತ ವಿದ್ಯಾರ್ಥಿ ಒಕ್ಕೂಟ, ಜಿಲ್ಲಾ ವಿಶ್ವಕರ್ಮ ಮಹಾಮಂಡಲ, ಜಿಲ್ಲಾ ಯಾದವ ಸಂಘದ ವತಿಯಿಂದ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿ ಬಜೆಟ್ ನಲ್ಲಿ ಹಿಂದ ವರ್ಗಗಳಿಗೆ ಅನ್ಯಾಯ ಖಂಡಿಸಿ, ಮೀಸಲಾತಿ ಕಬಳಿಸುವ ಹುನ್ನಾರ ಖಂಡಿಸಿ ಪ್ರತಿಭಟನೆ ನಡೆಯಿತು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕೆಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಖಾಲಿ ಬಿಂದಿಗೆ ಪ್ರದರ್ಶಿಸಿದರು. ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ. ಮೀಸಲಾತಿ ಕಬಳಿಸುವ ಹುನ್ನಾರ ನಡೆದಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಕಾಂತಾರಾಜು ಅಯೋಗದ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿದರು. ಕೆಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹಿಂದೆ ನಡೆದ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಾಗೃತ ವೇದಿಕೆ ಅಧ್ಯಕ್ಷ ಶಿವಾರಾಮ್, ಪೆÇ್ರ ಭಗವಾನ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯಾದ್ಯಂತ ಇನ್ನು 15ದಿನಗಳ ಕಾಲ ಯಾವುದೇ ಧರಣಿ, ಪ್ರತಿಭಟನೆಗಳಿಗೆ ಅವಕಾಶವಿಲ್ಲವೆಂದು ಹೇಳಿದ್ದು ಆದೇಶಿಸಿದ್ದರು. ಆದರೆ ಪ್ರತಿಭಟನಾಕಾರರು ತಮಗೆ ಸಂಬಂಧವಿಲ್ಲದಂತೆ ಕೆಲವರು ಮಾಸ್ಕ್ ಧರಿಸಿಯೂ, ಮೂಗು ಮತ್ತು ಬಾಯಿಯ ಕೆಳಗಡೆ ಧರಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಗುಂಪಿನಲ್ಲಿಯೇ ಪ್ರತಿಭಟನೆ ನಡೆಸಿದ್ದು ಕಂಡು ಬಂದಿದೆ. ಜಿಲ್ಲಾಧಿಕಾರಿಗಳ ಕಛೇರಿ ಎದುರೇ ಈ ಪ್ರತಿಭಟನೆ ನಡೆದರೂ ಸಂಬಂಧಪಟ್ಟವರು ಯಾರೂ ಇತ್ತ ಗಮನ ಹರಿಸಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.