ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರ ಬಂಧನ

ಅಫಜಲಪುರ,ಜ.17-ಪಟ್ಟಣದಲ್ಲಿ ಇತ್ತೀಚೆಗೆ ಜರುಗಿದ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ನಾಲ್ವರು ಮಹಿಳೆಯರನ್ನು ಬಂಧಿಸಿ 14 ಬಂಗಾರ ತಾಳಿ, 60 ಗುಂಡುಗಳು ಸೇರಿದಂತೆ 1.5 ಲಕ್ಷ ರೂಪಾಯಿ ಮೌಲ್ಯದ 35 ಗ್ರಾಂ.ಚಿನ್ನಾಭರಣ ಜಪ್ತಿ ಮಾಡಿಕೊಡಿ ಆರೋಪಿ ಮಹಿಳೆಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ 5-6 ಜನ ಮಹಿಳೆಯರು ಬಂಗಾರದ ಮಾಂಗಲ್ಯ ಕಳವಾದ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಈ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.