ಜಾನಪದ ಕಲೆ ಉಳಿಸಿ, ಬೆಳೆಸಿ

ಚಿತ್ರದುರ್ಗ.ಜ.೮; ನಂಬಿಕೆ, ಅಪನಂಬಿಕೆ, ಮೂಢನಂಬಿಕೆ ಮೀರಿ ನಂಬಿಕೆಗಳ ಆಧಾರದ ಮೇಲೆ ಬದುಕಿರುವಂತಹದು ಜಾನಪದ. ಜಾನಪದ ಮನೆಯ ಮದ್ದು. ಇಂತಹ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಹೆಚ್.ವಿಶ್ವನಾಥ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ  ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸೋಬಾನೆ ಪದ, ಡೊಳ್ಳುಕುಣಿತ, ವೀರಗಾಸೆ, ಕಂಸಾಳೆ, ಸಣ್ಣಾಟ, ದೊಡ್ಡಾಟ ಸೇರಿದಂತೆ ವಿವಿಧ ಜಾನಪದ ಕಲಾ ಪ್ರಕಾರಗಳಿದ್ದು, ನಮ್ಮ ಪಾರಂಪರಿಕ ಕಲೆ, ಸಂಸ್ಕøತಿಯನ್ನು ಉಳಿಸುವ ಜೊತೆಗೆ ನಾಡು-ನುಡಿಯನ್ನು ಸಂರಕ್ಷಿಸುವ ಕಾರ್ಯವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಾಡುತ್ತಿದೆ ಎಂದರು.ಸರ್ಕಾರದಿಂದ ಕಲಾವಿದರಿಗೆ ಹಲವು ಸೌಲಭ್ಯಗಳಿದ್ದು, ಅವುಗಳನ್ನು ಸದ್ಭಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.