ಜಾನಪದ ಪರಿಷತ್ತಿನ ಅಧ್ಯಕ್ಷೆಯಾಗಿ ಅಂಜಲಿ ಬೆಳಗಲ್

ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ8: ಕವಯತ್ರಿ ಅಂಜಲಿ ಬೆಳಗಲ್ ಅವರನ್ನು ಕನ್ನಡ ಜಾನಪದ ಪರಿಷತ್ತಿನ ಹೊಸಪೇಟೆ ತಾಲೂಕು ಅಧ್ಯಕ್ಷರನ್ನಾಗಿ ನೇಮಿಸಿ ಪರಿಷತ್ತಿನ ಅಧ್ಯಕ್ಷ ಡಾ. ಎಸ್. ಬಾಲಾಜಿ ಅವರು ಆದೇಶಿಸಿದ್ದಾರೆ.
ಸಮಾಜ ಸೇವೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಜಲಿ ಬೆಳಗಲ್ ಅವರು ಗಡಿನಾಡು ಉತ್ಸವ, ರಾಜ್ಯಮಟ್ಟದ ಉತ್ಸವ, ಬಹುಭಾಷಾ ಕವಯತ್ರಿಯಾಗಿ ಗುರುತಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರನ್ನು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಜಾನಪದ ಕಲೆ, ಸಂಸ್ಕøತಿ ಹಾಗೂ ಸಾಹಿತ್ಯ ಬೆಳೆವಣಿಗೆಗೆ ಕಾರ್ಯಮುಖವಾಗಲು ಆದೇಶದಲ್ಲಿ ತಿಳಿಸಿದ್ದಾರೆ.