ಜಾನ್ಸಿ ರಾಣಿ ಲಕ್ಷ್ಮೀಬಾಯಿ ಧೀರ ಸ್ವಾತಂತ್ರ್ಯ ಹೋರಾಟಗಾರ್ತಿ

ಕಲಬುರಗಿ,ನ.18: ನಮ್ಮ ದೇಶಕ್ಕೆ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ಹೋರಾಡಿದ್ದಾರೆ. ಮಹಿಳೆಯಾಗಿ ಅತ್ಯಂತ ಧೀರ, ಶೂರತನದಿಂದ ಹೋರಾಟ ಮಾಡುವ ಮೂಲಕ ಜಾನ್ಸಿ ರಾಣಿ ಲಕ್ಷ್ಮೀಬಾಯಿಯವರು ಮಹಿಳಾ ಲೋಕಕ್ಕೆ ಮಾದರಿಯಾಗಿದ್ದಾರೆಂದು ಎಚ್.ಬಿ.ಪಾಟೀಲ ಹೇಳಿದರು.
ಅವರು ನಗರದಲ್ಲಿನ ಎಂ.ಎಂ. ಎನ್ ಟ್ಯೂಟೋರಿಯಲ್ಸ್‍ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಜಾನ್ಸಿ ರಾಣಿ ಲಕ್ಷ್ಮೀಬಾಯಿ ಜಯಂತಿ’ಯಲ್ಲಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಮಾತನಾಡುತ್ತಿದ್ದರು.
ಚಿಂತಕ ನರಸಪ್ಪ ಬಿರಾದಾರ ದೇಗಾಂವ ಮಾತನಾಡಿ, ಹಿಳೆಯರು ಎದೆಗುಂದಬೇಕಾಗಿಲ್ಲ. ಲಕ್ಷ್ಮೀಬಾಯಿಯಂತಹ ಅನೇಕ ಮಹಿಳಾ ಹೋರಾಟಗಾರರ ಬದುಕು ಆದರ್ಶವಾಗಿಟ್ಟುಕೊಂಡು ಮುನ್ನಡೆಯಬೇಕಾಗಿದೆಯೆಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಅಣ್ಣಾರಾವ ಮಂಗಾಣೆ, ಬಸವರಾಜ ಎಸ್.ಪುರಾಣೆ, ಅಮರ ಜಿ.ಬಂಗರಗಿ, ಮಹಾದೇವ, ಎಸ್.ಎಸ್.ಪಾಟೀಲ ಬಡದಾಳ, ಓಂಕಾರ ಗೌಳಿ ಸೇರಿದಂತೆ ಮತ್ತಿತರರಿದ್ದರು.