ಜಾನ್ ಪುತ್ರ ಥಾಮಸ್ ಬಿಜೆಪಿಗೆ ಸೇರಲು ನಿರ್ಧಾರ

ಬೆಂಗಳೂರು, ಮಾ.೨೪- ಮಾಜಿ ಸಚಿವ ಟಿ.ಜಾನ್‌ರವರ ಪುತ್ರ ಡಾ//ಥಾಮಸ್ ಜಾನ್‌ರವರು ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಕಾರ್ಯವೈಖರಿ ಹಾಗೂ ಬಿ.ಜೆ.ಪಿ. ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ನಾಳೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ.
ಡಾ//ಥಾಮಸ್ ಜಾನ್‌ರವರು ಎಂ.ಎಸ್. ರಾಮಯ್ಯ ವೈದ್ಯಕೀಯ ಮಹಾವಿದ್ಯಾಲಯದಿಂದ ವೈದ್ಯಕೀಯ ಪದವಿದರರಾಗಿದ್ದು. ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಂದೆಯವರು ಎಸ್.ಎಂ. ಕೃಷ್ಣರವರ ಸರ್ಕಾರದಲ್ಲಿ ಸಚಿವರಾಗಿದ್ದರು. ಟಿ.ಜಾನ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರೂ ಆಗಿರುವ ಥಾಮಸ್ ನಮ್ಮ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ನರೇಂದ್ರ ಮೋದಿಯವರ ನಾಯಕತ್ವದ ಅಗತ್ಯವಿದೆ ಎಂದು ತಿಳಿಸಿದರು. ಹಾಗೂ ರಾಜ್ಯದ ಬಿಜೆಪಿ ಪಕ್ಷದ ಅಧ್ಯಕ್ಷ ಬಿ ವೈ ವಿಜಯೇಂದ್ರ ರವರ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ ಎನ್ ಅಶ್ವಥ್ ನಾರಾಯಣ್ ರವರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರ ನೇತೃತ್ವದಲ್ಲಿ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ೨೮ ಕ್ಷೇತ್ರಗಳಲ್ಲೂ ಬಿಜೆಪಿ ಪಕ್ಷವು ಜಯಭೇರಿಯನ್ನು ಬಾರಿಸಲಿದೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಧರ್ಮಗಳ, ಎಲ್ಲಾ ಜಾತಿಗಳ ಜನತೆಯು ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.