ಜಾರ್ಖಂಡ್ ಶಿಕ್ಷಣ ಸಚಿವ ನಿಧನ

ರಾಂಚಿ, ಏ.೬-ಜಾರ್ಖಂಡ್‌ನ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ೯ ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಅವರ ನಿಧನಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.