ಜಾಲತಾಣದಲ್ಲಿ ದ್ವೇಷ ಪೋಸ್ಟ್ ಸಿಟಿ ರವಿ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು, ಮಾ. ೨೧- ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿ ನೋಡಲ್ ಅಧಿಕಾರಿಯ ಸೂಚನೆ ಹಿನ್ನೆಲೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಕೆ. ಜಯಲಕ್ಷಮ್ಮ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ಸಾಗರಗಳ ಅಳವನ್ನು ಆಳೆಯಬಹುದು ಇಂದು ಹಾಗೂ ಹಿಂದೂ ಧರ್ಮ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯುವುದು ಆಗುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.
ಹಿಂದೂ ಧರ್ಮದಲ್ಲಿ ಶಕ್ತಿಯೆಂಬುದು ಎಂಬ ಪದವಿದೆ. ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ದುಷ್ಟಶಕ್ತಿಗಳ ದಾಳಿಯಿಂದ ನಮ್ಮ ಧiವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ಧಯವಾಗಿ ತೆಗೆದುಹಾಕಬೇಕೆಂದು ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು.
ಈ ಪೋಸ್ಟ್ ಮಾದರಿ ನೀತಿ ಸನ್ನಿಹಿತಯ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿತ್ತು.
ಈ ವರದಿ ಬಂದ ಹಿನ್ನೆಲೆಯಲ್ಲಿ ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.