ಜಿಂದಾಲ್ ಕೋವಿಡ್ ಕೇರ್ ಆಸ್ಪತ್ರೆಗೆ ಆನಂದಸಿಂಗ್ ಭೇಟಿ‌ ಪರಿಶೀಲನೆ

ಬಳ್ಳಾರಿ, ಮೇ 29: ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಕಾರ್ಖನೆಯ ಎದುರುಗಡೆ ಶಾಲೆಯ ವಿಶಾಲ ಮೈದಾನದಲ್ಲಿ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಹಾಸಿಗೆಗಳ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ದಾಖಲಾಗಿರುವ ಸೊಂಕಿತರೊಂದಿಗೆ ಸಂವಾದ ನಡೆಸಿದರು. ಚಿಕಿತ್ಸೆ ಹೇಗೆ ನೀಡಲಾಗುತ್ತಿದೆ, ಔಷಧಿ ಸರಿಯಾಗಿ ಕೊಡುತ್ತಿದ್ದಾರೆಯೇ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಬಂದು ತಪಾಸಣೆ ಮಾಡುತ್ತಿದ್ದಾರೆಯೇ, ಊಟ ಹೇಗಿದೆ ಎಂಬುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸೊಂಕಿತರೊಂದಿಗೆ ಚರ್ಚೆ ನಡೆಸಿದರು.
ನಂತರ ಅವರು ಆಸ್ಪತ್ರೆಯ ಹೊರಗಡೆ ಕುಳಿತಿದ್ದ ಸೊಂಕಿತರ ಸಂಬಂಧಿಕರೊಂದಿಗೂ ಮಾತನಾಡಿದ್ದು ಕಂಡುಬಂತು.
ಇದಾದ ನಂತರ ಅವರು ಆಸ್ಪತ್ರೆಯ ನೋಡಲ್ ಅಧಿಕಾರಿಗಳಾದ ಸಿದ್ರಾಮಪ್ಪ ಚಳಕಾಪುರೆ, ಡಾ.ದೇವಾನಂದ,ಡಾ.ಮರಿರಾಜ್ ಹೂಗಾರ ಸೇರಿದಂತೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.