ಜಿಎಂಐಟಿಯಲ್ಲಿ  ವಿದ್ಯಾರ್ಥಿಗಳಿಗೆ ಕಾರ್ಯಗಾರ

ದಾವಣಗೆರೆ. ನ.೯; ನಗರದ  ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ ಎಂಬಿಎ ಸೇರ ಬಯಸುವ ಆಕಾಂಕ್ಷಿಗಳಿಗೆ ಪಿ ಜಿ ಸಿ ಇ ಟಿ ಪ್ರವೇಶಾತಿ ಅನುಗುಣವಾಗಿ ನಾಲ್ಕು ದಿನದ ಕಾರ್ಯಗಾರದ ಉದ್ಘಾಟನೆಯನ್ನು ಸೆಮಿನಾರ್ ಹಾಲಿನಲ್ಲಿ ನೆರವೇರಿಸಲಾಯಿತು.ರಾಜ್ಯದ ವಿವಿಧ ವಿಭಾಗಗಳಿಂದ ಒಟ್ಟು 156 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಎಂಬಿಎ ಸೇರ ಬಯಸುವ ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ಪ್ರವೇಶಾತಿ ಅನುಗುಣವಾಗಿ ನಾಲ್ಕು ದಿನದ ತರಬೇತಿ ಕಾರ್ಯಕ್ರಮ ಇದಾಗಿದ್ದು, ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಠ್ಯಕ್ರಮದ ಅನುಗುಣವಾಗಿ ತರಬೇತಿಯನ್ನು ನೀಡಲಾಗುವುದು ಎಂದು ಎಂಬಿಎ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್, ಈ ನಾಲ್ಕು ದಿನದ ತರಬೇತಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನಿಮ್ಮ ಕನಸನ್ನು ಈಡೇರಿಸಿ ಕೊಳ್ಳಬೇಕೆಂದು ಕರೆ ಕೊಟ್ಟರು. ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಕೈಗಾರಿಕೆಗಳಲ್ಲಿ ಎಂಬಿಎ ವಿದ್ಯಾರ್ಥಿಗಳ ಅವಶ್ಯಕತೆ ಹೆಚ್ಚಾಗಿದ್ದು, ಅನೇಕ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಎಂಬಿಎ ಆಯ್ಕೆ ಸರಿಯಾದ ಕ್ರಮವಾಗಿದ್ದು, ಹೆಚ್ಚಿನ ಜ್ಞಾನ ಸಂಪಾದನೆಯ ಮೂಲಕ ಸಂಪನ್ಮೂಲ ವ್ಯಕ್ತಿಗಳಾಗಿ ಬೆಳೆಯಬೇಕೆಂದು ತಿಳಿಸಿದರು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಡಾ ಪ್ರಶಾಂತ್ ಕುಮಾರ್ ಓ ನೆರವೇರಿಸಿದರು. ಪ್ರಾಧ್ಯಾಪಕಿ ಸಂಧ್ಯಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಧ್ಯಾಪಕಿ ಆಶಾ ವಂದನೆಗಳನ್ನು ಅರ್ಪಿಸಿದರು.