ಜಿಎಂಐಟಿ ಕಾಲೇಜಿನಲ್ಲಿ ಪುಣ್ಯಸ್ಮರಣೆ


ದಾವಣಗೆರೆ. ಡಿ.೧; ಜಿ. ಎಂ. ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ದಿ. ಶ್ರೀ ಜಿ. ಮಲ್ಲಿಕಾರ್ಜುನಪ್ಪ ಮತ್ತು ದಿ. ಶ್ರೀಮತಿ ಹಾಲಮ್ಮನವರಿಗೆ ಪುಷ್ಪಾರ್ಚನೆಯೊಂದಿಗೆ ನಮನ ಸಲ್ಲಿಸಲಾಯಿತು. ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಮಾತನಾಡಿ ಮಲ್ಲಿಕಾರ್ಜುನಪ್ಪನವರ ಕನಸಿನ ಕೂಸಾದ ಜಿಎಂಐಟಿಯನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ, ಜಿಎಂ ಗ್ರೂಪ್ ಮತ್ತು ಇನ್ನಿತರ ಸಂಘ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರಿಗೆ ಅನ್ನದಾತರಾಗಿದ್ದರೆ, ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾದಾನಿಗಳಾಗಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಇತರ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.