ಜಿಎಂಐಟಿ  ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ದಾವಣಗೆರೆ. ನ.೧೮; ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಕಂಪನಿ ಅವಕಾಶಗಳನ್ನು ನೀಡಲಾಗುವುದು ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ  ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್  ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ  ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.