ಜಿಎನ್‍ಡಿ ಭಾಂಗ್ರಾ ನೃತ್ಯ ತಂಡಕ್ಕೆ ಪ್ರಶಸ್ತಿ – ಸನ್ಮಾನ

ಬೀದರ್: ಜ.19:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಆಯೋಜಿಸಿದ್ದ ಯುಕ್ತಿ-2024 ರಾಷ್ಟ್ರೀಯ ಮಟ್ಟದ ಟೆಕ್ನೋ ಕಲ್ಚರಲ್ ಫೆಸ್ಟ್‍ನಲ್ಲಿ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಭಾಂಗ್ರಾ ನೃತ್ಯ ತಂಡವು ತಮ್ಮ ಪ್ರತಿಭೆಯನ್ನು ತೊರಿಸಿ ಪ್ರಶಸ್ತಿ ಪಡೆದುಕೊಂಡಿದೆ.
ರಾಷ್ಟ್ರೀಯ ಮಟ್ಟದ ಟೆಕ್ನೋ ಕಲ್ಚರಲ್ ಫೆಸ್ಟ್ ವಾರ್ಷಿಕ ಕಾರ್ಯಕ್ರಮವಾಗಿದ್ದು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ತಮ್ಮ ಸಾಂಸ್ಕøತಿಕ ಪ್ರತಿಭೆಯನ್ನು ಪ್ರದರ್ಶಿಸಿದರು. ಜಿ.ಎನ್.ಡಿ. ಇಂಜಿನೀಯರಿಂಗ್ ಕಾಲೇಜಿನ ಭಾಂಗ್ರಾ ನೃತ್ಯ ತಂಡವು ಸಾಂಪ್ರದಾಯಿಕ ಮತ್ತು ಆಧುನಿಕ ನೃತ್ಯ ಶೈಲಿಗಳ ಮಿಶ್ರಣದೊಂದಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದ ವಿದ್ಯಾರ್ಥಿಗಳಿಗೆ ಶ್ರೀ ನಾನಕ ಝಿರಾ ಸಾಹೇಬ್ ಫೌಂಡೆಷನನ ಅಧ್ಯಕ್ಷ ಡಾ.ಎಸ್.ಬಲಬೀರ ಸಿಂಗ್ ಕಾಲೇಜಿನಲ್ಲಿ ಸನ್ಮಾನಿಸಿದರು.
ಈ ಪ್ರಶಸ್ತಿಯು ತಂಡದ ಪ್ರತಿಭೆಯನ್ನು ಪ್ರದರ್ಶಿಸುವುದಲ್ಲದೆ, ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಜನರು ಆನಂದಿಸುವ ಪ್ರದರ್ಶನವನ್ನು ರಚಿಸಲು ನಾವು ಮಾಡಿದ ಪ್ರಯತ್ನ ಮತ್ತು ಉತ್ಸಾಹಕ್ಕೆ ಇದು ಮನ್ನಣೆಯಾಗಿದೆ ಎಂದು ಗುರುನಾನಕ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ರೇಷ್ಮಾ ಕೌರ್ ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಧನಂಜಯ್ ಮತ್ತು ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.