ಜಿಎಸ್‌ಟಿ ಹೇರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು, ಜು. ೧೫- ಜನರು ಉಪಯೋಗಿಸುವ ದಿನಸಿ ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರದ ಜಿಎಸ್‌ಟಿ ಹೇರಿರುವುದನ್ನು ಖಂಡಿಸಿ ದಿನಸಿ ವ್ಯಾಪಾರಿಗಳು ಇಂದು ಬೆಳಿಗ್ಗೆ ನ್ಯೂ ತರಗುಪೇಟೆಯ ಪ್ರವೇಶ ದ್ವಾರದ ಬಳಿ ಪ್ರತಿಭಟನೆ ನಡೆಸಿದರು.
ದಿ ನ್ಯೂ ತರಗುಪೇಟೆಯ ಮರ್ಚೆಂಟ್ ಅಸೋಸಿಯೇಷನ್ ವತಿಯಿಂದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಅಸೋಸಿಯೇಷನ್ ಅಧ್ಯಕ್ಷ ಬಿ.ಪಿ. ದಿನೇಶ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರಣವಾಗಿರುವ, ಅಗತ್ಯ ಆಹಾರ ವಸ್ತುಗಳ ಮೇಲೆ ಶೇ. ೫ ರಷ್ಟು ಜಿಎಸ್ ಟಿ ಹೇರಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.
ಆಹಾರ ಉತ್ಪನ್ನಗಳ ಮೇಲೆ ಹೇರಿರುವ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ರವಿ ಹಾಗೂ ಎಪಿಎಂಸಿ ಯಾರ್ಡ್ ಮತ್ತು ದಿ ಕರ್ನಾಟಕ ರೈಸ್ ಮಿಲ್ಲರ್‍ಸ್ ಅಸೋಸಿಯೇಷನ್ ನ ಎಲ್ಲಾ ಸದಸ್ಯರು ಭಾಗವಹಿಸಿದ್ದರು.