ಜಿಎಸ್ ಟಿ ವಿರೋಧಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

ಅಥಣಿ :ಜು.28: ಹಣದುಬ್ಬರ, ಬೆಲೆ ಏರಿಕೆ, ಮತ್ತು ದಿನನಿತ್ಯದ ಅಗತ್ಯ ವಸ್ತುಗಳ ಮೇಲೆ ಹೇರಿರುವ ಜಿಎಸ್ ಟಿ ಹಿಂಪಡೆಯುವಂತೆ ಆಗ್ರಹಿಸಿ ಅಥಣಿಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು

ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಪ್ರತಿಭಟನೆಯಲ್ಲಿ ರೈತ ಸಂಘದ ಕಾರ್ಯಕರ್ತರು ಮಾಜಿ ಸೈನಿಕರ ಸಂಘದ ಕಾರ್ಯಕರ್ತರು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ಚಿಕ್ಕೋಡಿ ಜಿಲ್ಲಾ ಸಂಯೋಜಕ ಸಂಪತಕುಮಾರ ಶೆಟ್ಟಿ ಮಾತನಾಡಿ ಹಣದುಬ್ಬರ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಜನ ಸಾಮಾನ್ಯರ ಮೇಲೆ ಜಿ ಎಸ್ ಟಿ ಹೊರೆ ಹೇರಿದ್ದನ್ನು ಖಂಡಿಸಿ ನಮ್ಮ ಪಕ್ಷದಿಂದ ಪ್ರತಿಭಟನೆ ನಡೆಸಿದ್ದು ತಕ್ಷಣ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಹೇರಿರುವ ಜಿ ಎಸ್ ಟಿ ತೆರಿಗೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ಇನ್ನೂ ಕಾಂಗ್ರೆಸ್ ಪಕ್ಷ ಐಟಿ ಇಡಿ ಹಾಗೂ ಸಿಬಿಐಯಂತಹ ತನಿಖಾ ಸಂಸ್ಥೆಗಳಿಗೆ ಹೆದರಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಂದಾಗುತ್ತಿಲ್ಲಾ ಕಾಂಗ್ರೆಸ್ ಪಕ್ಷದ ಎಪ್ಪತ್ತು ವರ್ಷಗಳ ಸಾಧನೆ ಏನು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು

ಇದೆ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕಾಧ್ಯಕ್ಷ ಶಿವಾನಂದ ಖೋತ, ಗುರಪ್ಪಾ ಮಗದುಮ್ಮ, ವಿನಾಯಕ ದೇಸಾಯಿ, ಎನ್ ಕೆ ಪಾಟೀಲ, ಚನ್ನಗೌಡಾ ಇಮಗೌಡರ, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.