
ಕಲಬುರಗಿ,ಮಾ.18-ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.
ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಈ ಹಿಂದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಯುವಕನೊಬ್ಬ ಅತ್ಯಾಚಾರ ವೆಸಗಿದ ಘಟನೆ ನಡೆದಿತ್ತು. ಘಟನೆ ಖಂಡಿಸಿ ಮತ್ತು ಆರೋಪಿಯನ್ನು ಬಂಧಿಸಲು ಆಗ್ರಹಿಸಿ ಮಹಿಳಾಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡಸಿದ್ದವು.
ಮೇಲಿಂದ ಮೇಲೆ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸುರಕ್ಷಿತೆ ಇಲ್ಲ ಎನ್ನುವಂತಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಸ್ಪತ್ರೆಯ ಆಡಳಿತ ಮಂಡಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.