ಜಿಮ್ಸ್ ನಲ್ಲಿ ಸ್ವಚ್ಛತಾ ಅಭಿಯಾನದ ಮೂಲಕ ಪರಿಸರ ದಿನ ಆಚರಣೆ

ಕಲಬುರಗಿ,ಜೂ.6: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೋಮವಾರ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿರ್ದೇಶಕಿ ಡಾ.ಕವಿತಾ ಪಾಟೀಲ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡೆಯುವ ಮೂಲಕ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ ಅವರು, ಪ್ರಸಕ್ತ 2023ರ ವಿಶ್ವ ಪರಿಸರ ದಿನವನ್ನು #BeatPlasticPollution ಎಂಬ ಘೋಷ್ಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಲು ಮತ್ತು ಜಾಗತಿಕ ಪರಿಹಾರಗಳನ್ನು ಕಂಡುಕೊಳ್ಳಲು ಪ್ಲಾಸ್ಟಿಕ್ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇಂದು ತುಂಬಾನೆ ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಬಸ್ ನಿಲ್ದಾಣದಲ್ಲಿ ಕಿರು ನಾಟಕ ಪ್ರದರ್ಶನ:

ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮಾಲಿನ್ಯದಿಂದಾಗುವ ಅನಾಹುತಗಳು ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಿರು ನಾಟಕ ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

ಇನ್ನು ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ #ಃeಚಿಣPಟಚಿsಣiಛಿPoಟಟuಣioಟಿ ಎಂಬ ವಿಷಯದ ಮೇಲೆ ಇತ್ತೀಚೆಗೆ ಆಯೋಜಿಸಿದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ಸಹ ವಿತರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಡಾ. ಉಮೇಶ ಎಚ್.ಆರ್., ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ ಪಿ.ಆರ್. ಸೇರಿದಂತೆ ವಿವಿಧ ಬೋಧಕ-ಬೋಧಕೇತರ ಸಿಬ್ಬಂದಿ, ಸುಮಾರು 250-300 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.