ಜಿಮ್ ತರಬೇತುದಾರ ‘ಖದೀಮ’ನ ಮೂಲಕ ನಾಯಕ

ಜಿಮ್ ತರಬೇತುದಾರ ಚಂದನ್, “ಖದೀಮ: ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗದಲ್ಲಿ ಅದೃಷ್ಠ ಪರೀಕ್ಷೆಗೆ ಇಳಿಸಿದ್ದಾರೆ. ಸದ್ದುಗದ್ದಲವಿದೆ ಚಿತ್ರೀಕರಣ ಪೂರ್ಣಗೊಂಡಿದ್ದು ಬಿಡುಗಡೆ ಹಂತಕ್ಕೆ ಬಂದಿದೆ’

ಬೆಂಗಳೂರು ಸುತ್ತಮುತ್ತ, ಬೆಂಗಳೂರಿನ ಸಿಟಿ ಮಾರ್ಕೆಟ್ ಹಾಗೂ ಕೇರಳದಲ್ಲಿ ಒಂದನ್ನು ಹಾಡನ್ನು ಚಿತ್ರೀಕರಿಸಲಾಗಿದೆ.

ಚಿತ್ರಕ್ಕೆ ಶಿವಕುಮಾರನ್ ಹಣಹಾಕಿದ್ದು, ಸಹ ನಿರ್ಮಾಪಕಿಯಾಗಿ ಯಶಸ್ವಿನಿ ಸಾಥ್ ಕೊಟ್ಟಿದ್ದಾರೆ.ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದ್ದಾರೆ

ನಿರ್ದೇಶಕ ಸಾಯಿ ಪ್ರದೀಪ್ ಮಾತನಾಡಿ,ಅತಿ ಶೀಘ್ರದಲ್ಲೇ ಆಡಿಯೋ, ಟ್ರೇಲರ್  ಬಿಡುಗಡೆ ಮಾಡಲಾಗುವುದು ಖದೀಮ ಒಳ್ಳೆ ಸಿನಿಮಾ.  ಪದ ಬಳಕೆ ಹಾಗೂ ದೃಶ್ಯಗಳಲ್ಲಿ ಅಸಭ್ಯ ಹಾಗೂ ಅಸಹ್ಯ ಬರುವುದಿಲ್ಲ. ಚಿಕ್ಕಮಕ್ಕಳಿಂದ ದೊಡ್ಡವರು ನೋಡುವ ಕನ್ನಡ ಸಿನಿಮಾ ಎಂದರು.

ನಟ ಚಂದನ್ ಮಾತನಾಡಿ,ನಿನ್ನೆವರೆಗೂ ನಾನು ಚಂದನ್. ಈಗ ಖದೀಮ. ಸಿನಿಮಾ ನೋಡಿದ ಮೇಲೆ ಚಂದನ್ ಅನ್ನುವುದನ್ನು ಮರೆತು ಖದೀಮ ಎಂದು ಕರೆಯುತ್ತಾರೆ. ಪಾತ್ರಕ್ಕೆ ಸಿಕ್ಸ್ ಪ್ಯಾಕ್ ಮಾಡಿ ರೆಡಿಯಾಗ್ಲಾ ಎಂದು ನಿರ್ದೇಶಕರನ್ನು ಕೇಳಿದೆ. ಅದಕ್ಕೆ ಅವರು ರೋಡಲ್ಲಿ ಬಿಟ್ಟಿರುವ ಹೋರಿಯಂಗೆ ಕಾಣಬೇಕು ಎಂದರು ಅದರಂತೆ ಇದ್ದೇನೆ ಎಂದರು.

ಅನುಷಾ ಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಶೋಭಾರಾಜ್, ಮಿಮಿಕ್ರಿ ದಯಾನಂದ್, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಗಿರಿಜಾ ಲೋಕೇಶ್ ಅವರಂತಹ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ. ಶಶಾಂಕ್ ಶೇಷಗಿರಿ ಸಂಗೀತ ನಾಗಾರ್ಜುನ್ ಛಾಯಾಗ್ರಹಣವಿದೆ.

ಚೇತನ್ ಕುಮಾರ್, ಪ್ರಮೋದ್ ಮರವಂತೆ ಹಾಗೂ ವೆಂಕಟೇಶ್ ಕುಲಕರ್ಣಿ ಹಾಗುಯ ಕವಿರಾಜ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್, ವಾಸುಕಿ ವೈಭವ್, ಚಂದನ್ ಶೆಟ್ಟಿ ಹಾಗೂ ಮಲಯಾಳಂನ ಯಾಸಿನ್ ನಾಜಿರ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.