ಜಿಲ್ಲಾಡಳಿತದಿಂದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಸಾಂಕೇತಿಕ ಆಚರಣೆ


ಬಳ್ಳಾರಿ,ಮಾ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಮಂಗಳವಾರ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‍ಬಾಬು ಅವರು ಅಗ್ನಿಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವುದರ  ಮೂಲಕ ನಮನ ಸಲ್ಲಿಸಿ ಜಯಂತಿಯ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.