ಜಿಲ್ಲಾಡಳಿತದಿಂದ ಜಗದ್ಗುರು ಶಂಕರಾಚಾರ್ಯರ ಜಯಂತಿ ಆಚರಣೆ

????????????????????????????????????


ಬಳ್ಳಾರಿ,ಏ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ಮಂಗಳವಾರ ಆದಿಗುರು ಶಂಕರಾಚಾರ್ಯರ ಜಯಂತಿಯನ್ನು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶಬಾಬು ಅವರು, ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ, ವಿಶ್ವ ತತ್ವಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಬ್ರಾಹ್ಮಣ ಒಕ್ಕೂಟದ ಉಪಾಧ್ಯಕ್ಷ ಡಾ.ಶ್ರೀನಾಥ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಡಣಾಪುರ, ಮಾಜಿ ನಗರಸಭಾ ಸದಸ್ಯ ಆರ್.ಎನ್.ರಘುನಾಥ, ಶ್ರೀ ಶಂಕರ ಮಠದ ಮುರಾರಿ. ಹೆಚ್.ಕೆ, ಜಿ.ಮಂಜುನಾಥ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.