ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

ವಿಜಯಪುರ,ಏ.14 :ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಶನಿವಾರ ಸರಳವಾಗಿ ದೇವರದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸರಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಅವರು ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರಾದ ಬಿ.ಎಂ.ನೂಲವಿ, ಎ.ಬಿ.ಕೋಷ್ಠಿ, ಎ.ಬಿ.ಅಂಕದ, ಆನಂದ ಹುಲಮನಿ, ಜವಳಗಿ ಎಂ.ಸಿ., ನಾಗಪ್ಪ ಭಾವಿಕಟ್ಟಿ, ಸಂತೋಷ ಬಂಡೆ, ಪಿ.ಎಂ. ಬಲ್ಲಾಳ, ವಿದ್ಯಾವತಿ ಅಂಕಲಗಿ, ಬಸವರಾಜ ಒಂಟಗೋಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.