ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ

ಕಲಬುರಗಿ:ಮೇ.14: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಮಂಗಳವಾರದಂದು ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಾರ್ಯಾಲಯದ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ ಅಹ್ಮದ್ ಅವರು ಭಾವಚಿತ್ರಕ್ಕೆ ಪುಷ್ಷಾರ್ಚನೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ್, ಸಮಾಜದ ಮುಖಂಡರುಗಳಾದ ಗೋಪಣ್ಣ ದೊಡ್ಡಮನಿ, ವಿ.ಸಿ. ನೀರಡಗಿ, ನರಸಪ್ಪ ಜಡಿ, ಅಶೋಕ ಚೂರಿ, ಶ್ರೀನಿವಾಸ ಗಾಂಧಿ, ಸೇರಿದಂತೆ ಜಿಲಾಮಟ್ಟದ ಅಧಿಕಾರಿಗಳು ಹಾಗೂ ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.