ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ


ಬಳ್ಳಾರಿ,ಮೇ 11- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ಬುಧವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‍ಬಾಬು ಅವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಾಜ ಹಿರಿಯ ಮುಖಂಡರುಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.