ಜಿಲ್ಲಾಡಳಿತದಿಂದ ಶ್ರೀ ಬಸವೇಶ್ವರ ಜಯಂತಿ ಆಚರಣೆ

ರಾಯಚೂರು,ಏ.೨೩ – ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಬಸವೇಶ್ವರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಏ.೨೩ರ(ಭಾನುವಾರ) ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಐಕ ನಿರ್ದೇಶಕಿ ಮಂಗಳಾ ನಾಯಕ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.