ಜಿಲ್ಲಾಡಳಿತದಿಂದ ಸರಳವಾಗಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ

ಬೀದರ ಏ. 6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏಪ್ರೀಲ್ 5ರಂದು ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಬೆಳಗ್ಗೆ ಕರ್ನಾಟಕ ಕಾಲೇಜು ಹತ್ತಿರದ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್. ಅವರು ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಬೌದ್ಧೆ, ರಾಜು ಕಾಡ್ಯಾಳ, ಚಂದ್ರಕಾಂತ ಹಿಪ್ಪಳಗಾಂವ್ ಹಾಗು ಇನ್ನೀತರರು ಇದ್ದರು.