ಜಿಲ್ಲಾಡಳಿತ ದಿಂದ ರಾಷ್ಟ್ರನಾಯಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ


ಸಂಜೆವಾಣಿ ವಾರ್ತೆ
ಹೊಸಪೇಟೆ ಏ14: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರಾಷ್ಟ್ರನಾಯಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿರುವ ವಿಶಿಷ್ಠ ಕಂಚಿನ ಪ್ರತಿಮೆಗೆ ಪುಷ್ಪ ನಮನಸಲ್ಲಿಸುವ ಮೂಲಕ ವಿಜಯನಗರ ಜಿಲ್ಲಾಡಳಿತ, ಡಾ.ಅಂಬೇಡ್ಕರ್ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪರವಾಗಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಶ್ರೀಹರಿಬಾಬು ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಉಮಾಪತಿ, ಗೌರವಾಧ್ಯಕ್ಷ ಎನ್.ವೀರಸ್ವಾಮಿ ಸೇರಿದಂತೆ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಮಾಜದ ಮುಖಂಡರು ಹಾಜರಿದ್ದು.