
ಬೀದರ್’:ಎ.23: ಬಸವಣ್ಣನವರ 890 ನೇ ಜಯಂತಿಯನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಂದು ಜಿಲ್ಲಾಡಳಿತ ಬೀದರ ವತಿಯಿಂದ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಬಸವೇಶ್ವರ ಪುತ್ಥಳಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪುಷ್ಪ ನಮನ ಸಲ್ಲಿಸಿದರು ನಂತರ ಬಸವಣ್ಣನವರ ವಚನ ವಾಚನ ಮಾಡುವ ಮೂಲಕ ಅವರಿಗೆ ಗೌರಮ ನಮನ ಸಲ್ಲಿಸಿದರು
ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಎಂ. ಅವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬಸವಣ್ಣನವರ ವಚನ ವಾಚನ ಮಾಡಿದರು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್. ಎಲ್ ಅವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಬಸವಣ್ಣನವರ ವಚನ ವಾಚನ ಮಾಡಿದರು.
ರಾಷ್ಟ್ರೀಯ ಬಸವದಳ ಅಧ್ಯಕ್ಷರಾದ ಬಸವರಾಜ ಧನ್ನೂರ ಮಾತನಾಡಿ ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸಿದ ಬಸವಣ್ಣನವರ 890 ನೇ ಜಯಂತಿಯನ್ನು ಇಂದು ವಿಶ್ವದಾದ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತಿದೆ. ಅನುಭವ ಮಂಟಪದ ಮೂಲಕ ಜಗತ್ತಿಗೆ ಮೊಟ್ಟ ಮೊದಲ ಪ್ರಜಾಪ್ರಭುತ್ವ ಕಲ್ಪನೆಯನ್ನು ಬಸವಣ್ಣನವರು ನೀಡಿ ಸಾಮಾಜಿಕ ಸಮಾನತೆ. ಸ್ತ್ರೀ ಸಮಾನತೆ ಸೇರಿದಂತೆ ಅವರು ಮಾನವ ಹಕ್ಕುಗಳ ಪ್ರತಿಪಾದಕರಾಗಿದ್ದರು. ಬಸವಣ್ಣನವರ ಜಯಂತಿಯನ್ನು ನಮ್ಮ ದೇಶದಲ್ಲಿ 3 ರಾಜ್ಯಗಳಾದ ಮಹಾರಾಷ್ಟ್ರ. ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಮಾತ್ರ ಆಚರಿಸಲಾಗುತ್ತಿದ್ದು ಇದು ಇಡೀ ದೇಶದಲ್ಲಿ ಆಚರಣೆಯಾಗುವಂತಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಗಂಧಗೆ. ವಿರೂಪಾಕ್ಷ ಗಾದಗಿ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು. ಬಸವ ಅನುಯಾಯಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.