
ವಿಜಯಪುರ, ಏ.05: ಭಗವಾನ್ ಮಹಾವೀರ ಜಯಂತಿಯನ್ನು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ಉಪ ನಿರ್ದೇಶಕ ಎ.ಬಿ. ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್, ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು