ಜಿಲ್ಲಾಧಿಕಾರಿಗಳಿಂದ ಗದಗ ಬೆಟಗೇರಿ ಅವಳಿ ನಗರ ಪರಿಶೀಲನೆ

ಗದಗ ಮೇ.31 : ಕೋರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಅವುಗಳ ಸರಿಯಾದ ಪಾಲನೆಯಾಗುತ್ತಿರುವ ಕುರಿತು ರವಿವಾರ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಖುದ್ದಾಗಿ ಅವಳಿ ನಗರದ ಪ್ರಮುಖ ಬೀದಿಗಳಿಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿದರು.

ಗದಗ ಬೆಟಗೇರಿ ಅವಳಿ ನಗರದ ಪ್ರಮುಖ ವೃತ್ತಗಳಾದ ಟಾಂಗಾಕೂಟ, ಬಸವೇಶ್ವರ ವೃತ್ತ, ಮಹೇಂದ್ರಕರ ಸರ್ಕಲ್, ಗಾಂಧಿ ಸರ್ಕಲ್, ಹಳೆ ಡಿಸಿ ಕಚೇರಿ ವೃತ್ತ ಸೇರಿದಂತೆ ಮತ್ತಿತರ ವೃತ್ತ ಹಾಗೂ ಬೀದಿಗಳಲ್ಲಿ ಸಂಚರಿಸಿ ಲಾಕ್ ದೌನ್ ಪರಿಸ್ಥಿತಿ ಹಾಗೂ ಸಾರ್ವಜನಿಕ ಸಹಕಾರ ಕುರಿತು ಅವಲೋಕಿಸಿದರು. ಹಾಗೂ ಅನಗತ್ಯವಾಗಿ ಸಣ್ಣ ಪುಟ್ಟ ಕಾರಣಗಳನ್ನು ನೀಡಿ ರಸ್ತೆಗಿಳಿಯುವ ಸಾರ್ವಜನಿಕ ಬಗ್ಗೆ ಶಿಸ್ತುಕ್ರಮಕ್ಕೆ ಸೂಚಿಸಿದರು.

ಜನಸಾಮಾನ್ಯರು ಆದಷ್ಟು ಮನೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಅಗತ್ಯ ಸಂದರ್ಭದಲ್ಲಿ ಮಾತ್ರವೇ ಹೊರ ಬಂದು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಪ್ಪದೇ ಮಾಸ್ಕ್ ಧರಿಸಬೇಕು. ಆಗಾಗ ಕೈಗಳನ್ನು ಶುಚಿಗೊಳಿಸಬೇಕು. ಹಾಗೂ ಲಾಕ್‍ಡೌನ್ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ನಿಯಮ ಉಲ್ಲಂಘನೆ ಮಾಡಿದಲ್ಲಿ ಶಿಸ್ತುಕ್ರಮ ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದರು. ಈ ವೇಳೆ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಜೊತೆಗಿದ್ದರು.