ಜಿಲ್ಲಾಧಿಕಾರಿಗಳಿಂದ ಚೆಕ್ ಪೆÇೀಸ್ಟ್ ಗೆ ಅನೀರಿಕ್ಷಿತ ಭೇಟಿ ಪರಿಶೀಲನೆ

ಅಥಣಿ /ಚಿಕ್ಕೋಡಿ : ಏ.2:ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ ಹಾಲಟ್ಟಿ ಚೆಕ್ ಪೆÇೀಸ್ಟ್ ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಅವರು ಅನೀರಿಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ ಪೆÇೀಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಹಾಲಟ್ಟಿ ಚೆಕ್ ಪೆÇೀಸ್ಟ್ ಗೆ ಅನೀರಿಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಅವರು ಖುದ್ದಾಗಿ ವಾಹನಗಳ ತಪಾಸಣೆ ನಡೆಸಿ ಚೆಕ್ ಪೆÇೀಸ್ಟಗಳ ಮೂಲಕ ಹಾದು ಹೊಗುವ ಪ್ರತಿಯೊಂದು ವಾಹನಗಳನ್ನು ಕುಲಂಕೂಷವಾಗಿ ಪರೀಶಿಲಿಸಬೇಕು ಎಂದು ಚೆಕ್ ಪೆÇೀಸ್ಟ್ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಚೆಕ್ ಪೆÇೀಸ್ಟಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಾಗರೂಕತೆಯಿಂದ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ, ಜಿಲ್ಲಾ ಪೆÇೀಲಿಸ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರುಗಳು ಜಿಲ್ಲಾಧಿಕಾರಿಗಳಿಗೆ ಸಾಥ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ, ತಹಶೀಲ್ದಾರ ಚಿದಂಬರ ಕುಲಕರ್ಣಿ, ಡಿ.ವೈ.ಎಸ್.ಪಿ. ಗೋಪಾಲಕೃಷ್ಣ ಗೌಡರ ಸೇರಿದಂತೆ ನೋಡೆಲ್ ಅಧಿಕಾರಿಗಳು ಹಾಜರಿದ್ದರು.
ಇದಕ್ಕೂ ಮುನ್ನ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹಾಗೂ ಜಿಲ್ಲಾಪೆÇೀಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರುಗಳು ಚಿಕ್ಕೋಡಿಯ ಆರ್.ಡಿ.ಹೈಸ್ಕೂಲಿನ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಸ್ಟ್ರಾಂಗ್ ರೂಂಗಳ ಭದ್ರತೆಯನ್ನು ಪರಿಶೀಲಿಸಿದರು.