ಜಿಲ್ಲಾಧಿಕಾರಿಗಳಿಂದ ಬಾಲಮಂದಿರಕ್ಕೆ ಭೇಟಿ : ಪರಿಶೀಲನೆ

(ಸಂಜೆವಾಣಿ ವಾರ್ತೆ)
ವಿಜಯಪುರ:ಆ.11: ವಿಜಯಪುರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಬಾಲಕ-ಬಾಲಕಿಯರ ಸರಕಾರಿ ಬಾಲಮಂದಿರಕ್ಕೆ ಗುರುವಾರ ಸಂಜೆ ಭೇಟಿ ನೀಡಿ ಬಾಲಮಂದಿರದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಬಾಲಮಂದಿರದ ಅಡುಗೆ ಕೋಣೆ ವೀಕ್ಷಣೆ ನಡೆಸಿ, ಶುಚಿತ್ವ ಕಾಯ್ದುಕೊಳ್ಳಬೇಕು. ಉತ್ತಮ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಮಕ್ಕಳಿಗೆ ಪೂರೈಸಬೇಕು. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಬಾಲಮಂದಿರದ ಮಕ್ಕಳಿಗೆ ಕಂಪ್ಯೂಟರ್ ಕೋಚಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಾಲಮಂದಿರದ ಆವರಣದಲ್ಲಿರುವ ಕೈತೋಟವನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಬಾಲಕಿಯರ ಬಾಲಮಂದಿರದಲ್ಲಿ 65 ಬಾಲಕಿಯರು ಹಾಗೂ ಬಾಲಕರ ಬಾಲಮಂದಿರದಲ್ಲಿ 60 ಬಾಲಕರಿದ್ದು ಪ್ರತಿಯೊಬ್ಬರಿಗೆ ಉತ್ತಮ ಗುಣಮಟ್ಟದ ಆಹಾರ ಹಾಗೂ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಬಾಲಮಂದಿರದ ಅಧೀಕ್ಷಕರಾದ ವೀಣಾ ಮಾಣಿ, ಮುಖ್ಯೋಪಾಧ್ಯಾಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.