ಜಿಲ್ಲಾಧಿಕಾರಿಗಳಿಂದ ವನಮಹೋತ್ಸವ ಕಾರ್ಯಕ್ರಮ ಸ್ಥಳ ಪರಿಶೀಲನೆ

ಬೀದರ, ಜೂ.29: ಜುಲೈ 01 ರಂದು ಬೀದರ ಕೋಳಾದ ಹತ್ತಿರದ ರೇಷ್ಮೆ ಇಲಾಖೆಯ ಆವರಣದಲ್ಲಿ ನಡೆಯಲಿರುವ ವನಮಹೋತ್ಸವದ ಮುಖ್ಯ ಕಾರ್ಯಕ್ರಮದ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

  ಈಗಾಗಲೇ ಕಾರ್ಯಕ್ರಮದ ದಿನದಂದು ಸಸಿಗಳನ್ನು ನೆಡಲು ಗುಂಡಿಗಳನ್ನು ತೋಡಲಾಗಿದೆ ಹಾಗೂ ಎಲ್ಲಾ ಸಿದ್ದತೆಗಳನ್ನು ಮಾಡಕೊಳ್ಳಲಾಗಿದೆ ಎಂದು ಬೀದರ ಪ್ರಾದೇಶೀಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ ಅವರು ಜಿಲ್ಲಾಧಿಕಾರಿಳಿಗೆ ಮಾಹತಿ ನೀಡಿದರು.

ಗುಂಡಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಕಾರ್ಯಕ್ರಮಕ್ಕೆ ಇನ್ನು ಹೆಚ್ಚಿನ ಅಗತ್ಯ ಸಿದ್ದತೆಗಳು ಬಾಕಿ ಇದ್ದಲಿ ಅವುಗಳನ್ನು ಈಗಲೇ ಸಿದ್ದತೆ ಮಾಡಿಕೊಳ್ಳಬೇಕು ಅಂದು ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು,

ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಬೀದರ ಪ್ರಾದೇಶಿಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.