ಜಿಲ್ಲಾಧಿಕಾರಿಗಳಿಂದ ಸಲಾಂ ಟೇಕಡಿ ಕುಡಿಯುವ ನೀರು ಶುದ್ಧೀಕರಣ ಘಟಕ ಕಾಮಗಾರಿ ವೀಕ್ಷಣೆ

ಕಲಬುರಗಿ,ಆ.28: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿ ಇರುವ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಇದಕ್ಕು ಮುನ್ನ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಕೆರೆಗೂ (ಅಪ್ಪನ ಕೆರೆ) ಭೇಟಿ ನೀಡಿ ಅಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿರುವ ಕೆಲಸಗಳನ್ನು ವೀಕ್ಷಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಆರ್.ಪಿ.ಜಾಧವ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ ಇದ್ದರು.