ಜಿಲ್ಲಾಧಿಕಾರಿಗಳಿಂದ ಸೈಕಲ್ ಜಾಥಾಗೆ ಚಾಲನೆ

ದಾವಣಗೆರೆ, ಏ. 30; ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಿಗಧಿಯಾಗಿರುವ ಹಿನ್ನಲೆಯಲ್ಲಿ ಎಲ್ಲರಿಗೂ ಜಾಗೃತಿ ಮೂಡಿಸುವ ಸಲುವಾಗಿ ಹಾಗು ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕೆಂದು ಹಾಗೂ ಎಲ್ಲರೂ ನೈತಿಕವಾಗಿ ಮತದಾನ ಮಾಡಬೇಕೆಂದು ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಇಂದು ಜಾಥಾ ಸೇರಿದಂತೆ ಜಿಲ್ಲೆಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿವಾನಂದ ಕಾಪಶಿ ಹೇಳಿದರು.ನಗರದ ದೃಶ್ಯ ಕಲಾ ಮಹಾವಿದ್ಯಾಲಯದ ಮುಂಭಾಗ ಭಾನುವಾರ ಜಿಲ್ಲಾಡಳಿತ, ಜಿಪಂ, ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ನಡೆ ಮತಗಟ್ಟೆ ಕಡೆ ಎಲ್ಲರೂ ಸಹಾ ತಮ್ಮ ಮತಗಟ್ಟೆಗಳು ಎಲ್ಲಿವೆ ಎಂದು ತಿಳಿದುಕೊಳ್ಳಬೇಕು. ಇದರಿಂದ ಮೇ. 10ರಂದು ಮತದಾನ ಮಾಡಲು ಮತಗಟ್ಟೆಗೆ ಹೋಗಲು ಅನುಕೂಲವಾಗಲಿದೆ. ಪ್ರತಿಯೊಬ್ಬರೂ ಕೂಡಾ ತಮ್ಮ ತಮ್ಮ ಮತಗಟ್ಟೆಗಳನ್ನು ಪರಿಚಯಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷರು, ಜಿಪಂ ಸಿಇಓ ಸುರೇಶ ಇತ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಡಿಎಚ್‌ಓ ಡಾ.ನಾಗರಾಜ, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶಕುಮಾರ, ಅಧಿಕಾರಿಗಳಾದ ಚಂದ್ರಶೇಖರ, ಜಿಲ್ಲಾ ಮತದಾನ ಜಾಗೃತಿ ಐಕಾನ್ ಪೃಥ್ವಿ ಶಾಮನೂರು, ಅಂಗವಿಕಲರ ಸಮಿತಿಯ ಐಕಾನ್ ದುಗ್ಗೇಶ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್, ಆರೋಗ್ಯಾಧಿಕಾರಿ ಡಾ.ದೇವರಾಜ ಪಟಗೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತ ನೆಲವಗಿ, ಡಾ.ನಾಗರಾಜ, ಡಾ.ಮಹೇಶ, ಡಾ.ನಟರಾಜ ಡಾ.ರಾಘವೇಂದ್ರ, ಡಾ.ಶ್ರೀನಿವಾಸ, ದಾವಣಗೆರೆ ಬೈಸಿಕಲ್ ಕ್ಲಬ್‌ನ ಕಾರ್ಯದರ್ಶಿ ಕಂಚಿಕೆರೆ ಮಹೇಶ, ವಿಜಯಕುಮಾರ, ಡಾ.ಸುರೇಶ, ಡಾ.ಮಹೇಶ, ಜಯಂತಿಲಾಲ್, ಹರೀಶ, ಸತೀಶ, ಜಿಲ್ಲಾ ಬೈಸಿಕಲ್ ಕ್ಲಬ್ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.