
(ಸಂಜೆವಾಣಿ ವಾರ್ತೆ)
ಬೀದರ್: ಎ.24:ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿನ್ನೆ ಜಗಜ್ಯೋತಿ ಬಸವೇಶ್ವರರ ಜಯಂತಿ ಚರುಗಿತು.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪೂಜ ಸಲ್ಲಿಸಿ, ಮಾಲಾರ್ಪಣೆಗೈದು ಜ್ಯೋತಿ ಬೆಳಗಿಸಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಲ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.