ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ. ಮಹಾಂತ ಶಿವಯೋಗಿಗಳಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನ ಆಚರಣೆ

ಕಲಬುರಗಿ,ಆ.01:ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ “ವ್ಯಸನ ಮುಕ್ತ ದಿನಾಚರಣೆ”ಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಡಾ. ಮಹಾಂತ ಶಿವಯೋಗಿ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ, ಜಿಲ್ಲಾಧಿಕಾರಿಗಳ ಕಚೇರಿಯ ಪ್ರೊಬೇಷನರಿ ತಹಶೀಲ್ದಾರ ವಾಸುದೇವ ವಿ. ಸ್ವಾಮಿ, ಭೂದಾಖಲೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ ಜಾಧವ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲಬುರಗಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಗುಣಕಿ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.