ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಿ ಡಿ.ಸಿ. ಆದೇಶ

ಕಲಬುರಗಿ,ನ.18:2021ರ ವಿಧಾನ ಪರಿಷತ್ ಚುನಾವಣೆ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಯನ್ನು ಶಾಂತಿಯುತವಾಗಿ ಜರುಗಲು ಅನುಕೂಲವಾಗುವಂತೆ ಇದೇ ನವೆಂಬರ್ 16 ರಿಂದ 26ರವರೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸುತ್ತಮುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಉಮೇದುವಾರಿಕೆ ಸಲ್ಲಿಸುವ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ ಸಿ.ಆರ್.ಪಿ.ಸಿ. ಕಲಂ 144ರನ್ವಯ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಿ ಗುಲಬರ್ಗಾ ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)ದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.