ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ: ಪೂರ್ವಭಾವಿ ಸಭೆ

ಚಿಂಚೋಳಿ,ಜು.15- ತಾಲೂಕಿನ ಭೂಂಯಾರ (ಕೆ) ಗ್ರಾಮದಲ್ಲಿ ನಾಳೆ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮ ಕುರಿತು ತಹಸಿಲ್ದಾರ್ ಅಂಜುಮ್ ತಬಸ್ಸುಮ್ ಅವರ ಅಧ್ಯಕ್ಷತೆಯಲ್ಲಿ ತಾಲೂಕ ಮಟ್ಟದ ಅಧಿಕಾರಿಗಳಿಗೆ ಸಭೆ ಜರಗಿತು.
ಸಭೆ ಉದ್ದೇಶಿಸಿ ಮಾತನಾಡಿದ ತಹಸಿಲ್ದಾರ್ ಅಂಜುಮ್ ತಬಸ್ಸುಮ್, ಅವರು, ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಎಲ್ಲಾ ತಾಲೂಕ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಬೇಕು ಎಲ್ಲ ಇಲಾಖೆಯ ಸರ್ಕಾರ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಗ್ರೇಡ್- 2 ತಹಸಿಲ್ದಾರ್ ವೆಂಕಟೇಶ್ ದುಗ್ಗನ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪ್ರಭುಲಿಂಗ, ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿಗಳಾದ ರಾಚಪ್ಪ ಭದ್ರಶೆಟ್ಟಿ, ಚಂದಾಪುರ ಆಸ್ಪತ್ರೆ ಆಡಳಿತಾಧಿಕಾರಿಗಳಾದ ಡಾ. ಸಂತೋಷ್ ಪಾಟೀಲ್, ಕಂದಾಯ ಇಲಾಖೆಯ ಸಿಬ್ಬಂದಿಗಳಾದ ಸುಭಾಷ್ ನಿಡಗುಂದಿ, ರವಿ ಪಾಟೀಲ್ ಚಿಟ್ಟ, ಮತ್ತೊಮ್, ಸುಮಾ, ಶಿವಾಜಿ, ಮತ್ತು ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು