ಜಿಲ್ಲಾಧಿಕಾರಿಗಳ ಭೇಟಿ: ಪರಿಶೀಲನೆ

ಗದಗ,ಡಿ31: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2020 ರ ಮತದಾನ ಈಗಾಗಲೇ ಜರುಗಿದ್ದು ಡಿಸೆಂಬರ್ 30ರಂದು ಮತ ಎಣಿಕಾ ಕಾರ್ಯ ಜಿಲ್ಲೆಯ ಆಯಾ ತಾಲೂಕಿನ ಕೇಂದ್ರ ಸ್ಥಾನದಲ್ಲಿ ನಡೆಯಿತು. ನರಗುಂದ ಹಾಗೂ ರೋಣ ತಾಲೂಕುಗಳ ಮತ ಎಣಿಕಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಭೇಟಿ ನೀಡಿ ಮತ ಎಣಿಕೆ ಪ್ರಕ್ರಿಯೆ ಕುರಿತು ಪರಿಶೀಲಿಸಿದರು. ಅಲ್ಲದೇ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿ ಸೇರಿದಂತೆ ಇತರೆ ಮತ ಎಣಿಕೆ ಪ್ರಕ್ರಿಯೆಯನ್ನು ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ , ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ತಾಲೂಕಾ ತಹಶೀಲ್ದಾರರು ಉಪಸ್ಥಿತರಿದ್ದರು.