ಜಿಲ್ಲಾಧಿಕಾರಿಯಾಗಿ ಎಂ.ಎಸ್.ದಿವಾಕರ್ ಅಧಿಕಾರ ಸ್ವೀಕಾರ


ಹೊಸಪೇಟೆ ಜು.20: ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ನಿಕಟಪೂರ್ವ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರ ವರ್ಗಾವಣೆ ನಂತರ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿಗಳಾದ ಎಂ.ಎಸ್.ದಿವಾಕರ್ ಅವರು ಬುಧವಾರ ಜಿಲ್ಲಾಧಿಕಾರಗಳ ಕಚೇರಿಗೆ ಆಗಮಿಸಿದರು. ಇದಕ್ಕೂ ಪೂರ್ವದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‍ಅಹಮ್ಮದ್ ಅವರನ್ನು ಭೇಟಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

One attachment • Scanned by Gmail